ಇದೇ ಮೊದಲ ಬಾರಿಗೆ ರಕ್ಷಿತ್ ಶೆಟ್ಟಿ ಪೊಲೀಸ್ ಪಾತ್ರದಲ್ಲಿ ನಟನೆ… ಯಾವ ಚಿತ್ರ?,, ಇಲ್ಲಿ ಓದಿ

 ರಕ್ಷಿತ್ ಶೆಟ್ಟಿ ಇದೇ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯಾಗಿ ಮಿಂಚಲಿರುವುದು ಪಕ್ಕಾ ಆಗಿದೆ. ಯೆಸ್,ಅವನೇ ಶ್ರೀಮನ್ನಾರಾಯಣ ಚಿತ್ರದಲ್ಲಿ ನಟ ರಕ್ಷಿತ್ ಶೆಟ್ಟಿ ಈಗ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿದೆ.

ನಟನೆಯ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿರುವ ರಕ್ಷಿತ್ ಶೆಟ್ಟಿಯ ಈ ಹೊಸ ಸಿನಿಮಾದಲ್ಲಿ ಶಾನ್ವಿ ಶ್ರೀವಾತ್ಸವ್ ನಾಯಕಿಯಾಗಿ ನಟಿಸಲಿದ್ದಾರೆ. ಅಚ್ಚುತ್ ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ಅಮರಾವತಿ ಎಂಬ ಕಾಲ್ಪನಿಕ ಪಟ್ಟಣದಲ್ಲಿರುವ ಭ್ರಷ್ಟ ಪೊಲೀಸ್ ಆಫೀಸರ್ ಕತೆ ಈ ಚಿತ್ರದ್ದಾಗಿದೆ.

ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ 80 ರ ದಶಕದ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಿಸೆಂಬರ್ 28 ರಂದು ಅವನೇ ಶ್ರೀಮನ್ನಾರಾಯಣ ಚಿತ್ರ ತೆರೆ ಮೇಲೆ ಬರಲಿದೆ.

Facebook Auto Publish Powered By : XYZScripts.com