ಈ ವರದ ವೀಕೆಂಡ್ ವಿತ್ ರಮೇಶ್ ನಲ್ಲಿ ರಕ್ಷಿತ್ ಶೆಟ್ಟಿ?

ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಕಳೆದ ವಾರ ಕರ್ನಾಟಕ ಸಿಂಗಂ ಖ್ಯಾತಿಯ ಎಸ್ ಪಿ ರವಿ ಚೆನ್ನವಣ್ಣನವರ್ ಹಾಗೂ ಸಂಗೀತ ನಿರ್ದೇಶಕ ವಿ ಹರಿಕೃಷ್ಣ ಕಾಣಿಸಿಕೊಂಡಿದ್ದರು. ಅಂದಹಾಗೆ ಈ ವಾರ ಸಾಧಕರ ಸೀಟಿನಲ್ಲಿ ಕೂರುವ ಸಾಧಕ ಯಾರು ಎಂಬ ಕುತೂಹಲ ನಿಮಗಿರುವುದು ಸಹಜ.

ಹೌದು ಈ ವಾರದ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಬಹಳಾನೇ ಸದ್ದು ಮಾಡಿದ ನಟ ರಕ್ಷಿತ್ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ. 2010 ರಲ್ಲಿ ರಿಲೀಸ್ ಆದ ನಮ್ ಏರಿಯಾದಲ್ಲಿ ಒಂದ್ ದಿನ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ರಕ್ಷಿತ್ ಶೆಟ್ಟಿ ಪಾದಾರ್ಪಣೆ ಮಾಡಿದ್ದರು. ನಂತರ 2013 ರಲ್ಲಿ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭರವಸೆಯ ನಾಯಕನಾಗಿ ಗುರುತಿಸಿಕೊಂಡಿದ್ದರು.

ರಕ್ಷಿತ್ ಶೆಟ್ಟಿ ಅವರು ಜೀವನದಲ್ಲಿ ಎದುರಿಸಿದ ಕಷ್ಟ, ನೋವು ಹಾಗೂ ಅವರ ಬದುಕಿನ ಕೆಲವೊಂದು ಇಂಟರೆಸ್ಟಿಂಗ್ ವಿಚಾರಗಳನ್ನು ವೀಕೆಂಡ್ ಟೆಂಟ್ ನಲ್ಲಿ ಹಂಚಿಕೊಳ್ಳಲಿದ್ದಾರೆ.

Facebook Auto Publish Powered By : XYZScripts.com