ಕಣ್ಣೀರಿಟ್ಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಕಾರಣ ಗೊತ್ತಾ.?

ಬೆಂಗಳೂರು: ಶಾಸಕ ಎನ್.ಎ. ಹ್ಯಾರಿಸ್ ಪುತ್ರ ನಲಪಾಡ್ ಹ್ಯಾರಿಸ್ ನಿಂದ ಭೀಕರವಾಗಿ ಹಲ್ಲೆಗೊಳಗಾದ ವಿದ್ವತ್ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಗೆ ಭೇಟಿ ನೀಡಿ ವಿದ್ವತ್ ಆರೋಗ್ಯ ವಿಚಾರಿಸಿದ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕಣ್ಣೀರಿಟ್ಟಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ಕೂಡ ಘಟನೆ ನಡೆದ ದಿನ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

ಇಂದು ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ, ವಿದ್ವತ್ ಅವರನ್ನು ಕಂಡು ಕಣ್ಣೀರು ಹಾಕಿದ್ದಾರೆ. ಆಸ್ಪತ್ರೆಯಿಂದ ಹೊರ ಬಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ವತ್ ನಮ್ಮ ಫ್ಯಾಮಿಲಿ ಫ್ರೆಂಡ್ ಆಗಿದ್ದು, ಆತನನ್ನು ಚಿಕ್ಕಂದಿನಿಂದಲೂ ನೋಡಿದ್ದೇನೆ. ಚಿಕಿತ್ಸೆ ಬಳಿಕ ವಿದ್ವತ್ ಚೇತರಿಸಿಕೊಳ್ಳುತ್ತಿದ್ದಾನೆ. ಕಾನೂನಿಗೆ ಯಾರೂ ದೊಡ್ಡವರಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಘಟನೆ ನಡೆಯಬಾರದಿತ್ತು. ನಾವೆಲ್ಲಾ ಒಳ್ಳೆಯವರಾಗಿ ಬದುಕೋಣ ಎಂದು ಹೇಳಿದ್ದಾರೆ.

Facebook Auto Publish Powered By : XYZScripts.com