ರಕ್ಷಿತ್ ಶೆಟ್ಟಿ ಮುಂದಿನ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ರಕ್ಷಿತ್ ಶೆಟ್ಟಿ ನಟನೆಯ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಚಿತ್ರೀಕರಣ ಇನ್ನು ಶುರುವಾಗಿಲ್ಲ. ಆದರೆ ಅದಕ್ಕೂ ಮುಂಚೆಯೇ ಸಿನಿಮಾದ ಬಿಡುಗಡೆಯ ದಿನಾಂಕ ನಿಗದಿ ಆಗಿದೆ. ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಡಿಸೆಂಬರ್ 28ಕ್ಕೆ ತೆರೆಗೆ ಬರಲಿದೆ. ಡಿಸೆಂಬರ್ 30ಕ್ಕೆ ಸರಿಯಾಗಿ ‘ಕಿರಿಕ್ ಪಾರ್ಟಿ’ ಸಿನಿಮಾ ಕೂಡ ರಿಲೀಸ್ ಆಗಿತ್ತು. ಈಗ ಡಿಸೆಂಬರ್ ತಿಂಗಳಿನಲ್ಲಿಯೇ ರಕ್ಷಿತ್ ಮತ್ತೊಂದು ಸಿನಿಮಾ ಬಿಡುಗಡೆಯಾಗಲಿದೆ. ಅಂದಹಾಗೆ, ಈ ಚಿತ್ರದಲ್ಲಿ ರಕ್ಷಿತ್ ನಟನೆ ಜೊತೆಗೆ ನಿರ್ಮಾಣ ಕೂಡ ಮಾಡಿದ್ದಾರೆ. ಪುಷ್ಕರ ಮಲ್ಲಿಕಾರ್ಜುನಯ್ಯ ಮತ್ತು ‘ರಂಗಿತರಂಗ’ ಖ್ಯಾತಿಯ ಪ್ರಕಾಶ್ ಜೊತೆ ಸೇರಿ ರಕ್ಷಿತ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.

Facebook Auto Publish Powered By : XYZScripts.com