ರವಿಚಂದ್ರನ್ ಖಳನಟನಾಗಿ ನಟಿಸಿರುವ ‘ಬಕಾಸುರ’ ಯಾವಾಗ ತೆರೆಗೆ ಬರಲಿದೆ?.. ಇಲ್ಲಿ ಓದಿ

ಸಿನಿಮಾ ಡೆಸ್ಕ್ : ಪದ್ಮಾವತಿ ಪಿಕ್ಚರ್ಸ್ ಲಾಂಛನದಲ್ಲಿ ರೋಹಿತ್ ಹಾಗೂ ತಂಡದವರು ನಿರ್ಮಿಸಿರುವ `ಬಕಾಸುರ` ಚಿತ್ರದ ಟ್ರೇಲರ್ ಯೂಟ್ಯೂಬ್ ನಲ್ಲಿ ಸದ್ದು ಮಾಡ್ತಿದೆ.

ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಪ್ರಧಾನ ಪಾತ್ರದಲ್ಲಿ ನಟಿಸಿರುವ ಈ ಚಿತ್ರದ ನಾಯಕರಾಗಿ ಆರ್.ಜೆ.ರೋಹಿತ್ ನಟಿಸಿದ್ದಾರೆ. ಮೊದಲ ಬಾರಿಗೆ ರವಿಚಂದ್ರನ್ ಅವರು ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ನವನೀತ್ ಈ ಚಿತ್ರಕ್ಕೆ ಆಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಹೆಚ್ಚಿದೆ. ಈಗಾಗಲೇ ಸಿನಿಮಾದ ಕೆಲಸಗಳು ಮುಗಿಯುವ ಹಂತಕ್ಕೆ ಬಂದಿದ್ದು, ಸದ್ಯದಲ್ಲೇ ಚಿತ್ರ ರಿಲೀಸ್ ಆಗಲಿದೆ.

ಅವಿನಾಶ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಮೋಹನ್ ಅವರ ಛಾಯಾಗ್ರಹಣವಿದೆ. ವೆಂಕಿ ಯುಡಿವಿ ಸಂಕಲನ ಹಾಗೂ ಜಾಗ್ವಾರ್ ಸಣ್ಣಪ್ಪ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Facebook Auto Publish Powered By : XYZScripts.com