ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೊಂದು ಗುಡ್ ನ್ಯೂಸ್!

ರಾಕಿಂಗ್ ಸ್ಟಾರ್ ಅಭಿಮಾನಿಗಳಿಗೊಂದು ಗುಡ್ ನ್ಯೂಸ್. ಹೌದು ಅದೇನಪ್ಪ ಅಂದ್ರೆ ಮೇ.3 ಅಂದ್ರೆ ನಾಳೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಕೆಜಿಎಫ್’ ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಲಿದೆ.

ಇಲ್ಲಿಯವರೆಗೂ ಈ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿರಲಿಲ್ಲ, ಆದ್ರೆ ಇದೀಗ ದಿನದಿಂದ ದಿನಕ್ಕೆ ಯಶ್ ಅಭಿಮಾನಿಗಳ ಕುತೂಹಲ ಹೆಚ್ಚಾಗಿದ್ದು, ಬಹಳ ನಿರೀಕ್ಷೆ ಹುಟ್ಟಿಸಿದೆ. ಸದ್ಯ ಯಶ್, ಅವರ ಅಭಿಮಾನಿಗಳೆದುರು ಫಸ್ಟ್ ಲುಕ್ ತರಲು ನಿರ್ಧರಿಸಿದ್ದಾರೆ. ಕೆಜಿಎಫ್ ಚಿತ್ರ 1970 ರ ದಶಕದ ಚಿತ್ರಕಥೆ ಆಗಿದ್ದರಿಂದ ಯಶ್ ಈ ಸಿನಿಮಾದಲ್ಲಿ ರೆಟ್ರೋ ಸ್ಟೈಲ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಉಗ್ರಂ ಖ್ಯಾತಿಯ ಪ್ರಶಾಂತ್ ನೀಲ್ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ಕೆಜಿಎಫ್’ ಕನ್ನಡದ ಬಿಗ್ ಬಜೆಟ್ ಸಿನಿಮಾವೆಂದು ಹೇಳಲಾಗ್ತಿದೆ.

Courtesy: Kannada News Now

Facebook Auto Publish Powered By : XYZScripts.com