ಲಿಪ್ ಸ್ಟಿಕ್’ಗೆ ‘ಎ’ ಸರ್ಟಿಫಿಕೇಟ್ ನೀಡಿ: ಕೋರ್ಟ್ ಆದೇಶ

ವಿವಾದಿತ ಲಿಪ್ ಸ್ಟಿಕ್ ಅಂಡರ್ ಮೈ ಬುರ್ಖಾ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ನೀಡುವಂತೆ ಚಲನಚಿತ್ರ ಪ್ರಮಾಣೀಕರಣ ಮೇಲ್ಮನವಿ ನ್ಯಾಯಮಂಡಳಿ ಕೇಂದ್ರ ಸೆನ್ಸಾರ್ ಮಂಡಳಿಗೆ ಸೂಚನೆ ನೀಡಿದೆ.

ಹೆಂಗಸರ ಲೈಂಗಿಕತೆಗೆ ಸಂಬಂಧಿಸಿದ ವಸ್ತುವನ್ನು ಒಳಗೊಂಡಿರುವ ಚಿತ್ರಕ್ಕೆ ಪ್ರಮಾಣ ಪತ್ರ ನೀಡಲು ಈ ಹಿಂದೆ ಸೆನ್ಸಾರ್ ಮಂಡಳಿ ನಿರಾಕರಿಸಿತ್ತು.

ಸೆನ್ಸಾರ್ ಮಂಡಳಿಯ ನಿರ್ಧಾರವನ್ನು ಪ್ರಶ್ನಿಸಿ ಚಿತ್ರತಂಡ ನ್ಯಾಯಾಲಯದ ಮೊರೆ ಹೋಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮಂಡಳಿ ಚಿತ್ರತಂಡ ಸ್ವಪ್ರೇರಿತವಾಗಿ ಕೆಲವು ದೃಶ್ಯಗಳನ್ನು ಕತ್ತರಿಸಬೇಕು ಹಾಗೂ ಲೈಂಗಿಕ ದೃಶ್ಯಗಳ ಅವಧಿಯನ್ನು ಕಡಿತಗೊಳಿಸಬೇಕು ಎಂದು ಸಲಹೆ ನೀಡಿದೆ.

ಲಿಪ್ ಸ್ಟಿಕ್ ಚಿತ್ರದಲ್ಲಿ ಅತಿಯಾದ ಲೈಂಗಿಕ ದೃಶ್ಯಗಳಿವೆ, ವ್ಯಭಿಚಾರಿ ಭಾಷಾ ಪ್ರಯೋಗವಿದೆ ಹಾಗೂ ಸಾಮಾಜಿಕ ಕಳಕಳಿಗೆ ಮಸಿಬಳಿಯುವ ದೃಶ್ಯಗಳಿವೆ ಎಂದು ಸೆನ್ಸಾರ್ ಮಂಡಳಿ ಚಿತ್ರಕ್ಕೆ ಪ್ರಮಾಣ ಪತ್ರ ನೀಡಲು ನಿರಾಕರಿಸಿತ್ತು. ಕೊಂಕಣಾ ಸೆನ್ ಮುಖ್ಯ ಭೂಮಿಕೆಯಲ್ಲಿರುವ ಈ ಚಿತ್ರವನ್ನು ಅಲಂಕೃತಾ ಶ್ರೀವಾತ್ಸವ ನಿರ್ದೇಶನ ಮಾಡಿದ್ದಾರೆ.

Courtesy: Kannada News Now

Facebook Auto Publish Powered By : XYZScripts.com