ಶೃತಿ ಹರಿಹರನ್ ಪತಿ ರಾಮ್ ಕುಮಾರ್ ಬಗ್ಗೆ ನಿಮಗೆಷ್ಟು ಗೊತ್ತು?.. ಇಲ್ಲಿ ಓದಿ

ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ್ದ ಶೃತಿ ಹರಿಹರನ್ ತಮ್ಮ ದೂರಿನ ಪತ್ರದಲ್ಲಿ ವೈಫ್ ಆಫ್ ರಾಮ್ ಕುಮಾರ್ ಎಂದು ನಮೂದಿಸಿದ್ದು ಈ ವಿಚಾರ ಇದೀಗ ಚರ್ಚೆಗೆ ಗ್ರಾಸವಾಗಿದೆ.

ಶೃತಿ ಹರಿಹರನ್ ಇಲ್ಲಿಯವರೆಗೂ ತಮಗೆ ಮದುವೆಯಾಗಿಲ್ಲ ಎಂದು ಹೇಳಿಕೊಂಡು ಬಂದಿದ್ದರು. ಆದರೆ ಇದೀಗ ದಿಢೀರ್ ಅಂತಾ ದೂರಿನ ಪತ್ರದಲ್ಲಿ ರಾಮ್ ಕುಮಾರ್ ಪತ್ನಿ ಎಂದು ನಮೂದಿಸಿದ್ದಾರೆ.

ರಾಮ್ ಕುಮಾರ್ ಕೇರಳದ ಪ್ರಸಿದ್ಧ ಕಲರಿ ಪಟ್ಟು ಎಂದು ತಿಳಿದು ಬಂದಿದೆ. ರಾಮ್ ಕುಮಾರ್ ಕೂಡ ನೃತ್ಯ ಕಲಾವಿದ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನೃತ್ಯ ನಿರ್ದೇಶಕರಾಗಿ ಹೆಸರು ಮಾಡಿದ್ದಾರೆ. ಈ ಹಿಂದೆ ಶೃತಿ ಸಹ ರಾಮ್ ಕುಮಾರ್ ಜತೆ ರಿಲೇಷನ್ ಶಿಪ್ ನಲ್ಲಿರುವುದಾಗಿ ಹೇಳಿಕೊಂಡಿದ್ದರು. ಆದರೆ ಎಲ್ಲಿಯೂ ತಾವು ಮದುವೆಯಾಗಿರುವುದಾಗಿ ಶೃತಿ ಹೇಳಿರಲಿಲ್ಲ. ಆದರೆ ಇದೀಗ ದೂರಿನ ಪತ್ರದಲ್ಲಿ ವೈಫ್ ಆಫ್ ರಾಮ್ ಕುಮಾರ್ ಎಂದು ಬರೆದಿದ್ದಾರೆ. ಈ ವಿಷಯ ಇದೀಗ ಚರ್ಚೆಗೆ ಗ್ರಾಸವಾಗಿದೆ.

Facebook Auto Publish Powered By : XYZScripts.com